ಮತ್ತೆ ಮುನ್ನೆಲೆಗೆ ಬಂದ ಲಿಂಗಾಯತ 2ಎ ಮೀಸಲಾತಿ!ಮಾ.12 ರಂದು ಕಲಬುರಗಿಯಲ್ಲಿ ಬೃಹತ್‌ ಸಮಾವೇಶ

Share the Post Now

ಬೆಳಗಾವಿ. ರಾಯಬಾಗ : ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದೆ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಇದೇ ಮಾರ್ಚ್ 12ರಂದು ಕಲಬುರಗಿಯಲ್ಲಿ ಬೃಹತ್‌ ಸಮಾವೇಶ ಏರ್ಪಡಿಸಲಾಗಿದೆಯೆಂದು ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಶುಕ್ರವಾರ ದಂದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರುಗೇರಿ ಪಟ್ಟಣದ ಹಣಮಂತಪ್ಪ ಲ.ಕಲ್ಲೋಳಿಕರ 70ನೇ ಪುಣ್ಯತಿಥಿ ಹಾಗೂ ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂದರ್ಭದಲ್ಲಿ ಸುದ್ದಿಗೋಷ್ಠಿ  ನಡೆಸಿ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಒಂಭತ್ತು ತಿಂಗಳು ಕಳೆದಿವೆ. ಮೀಸಲಾತಿ ವಿಚಾರದಲ್ಲಿ ಸರ್ಕಾರದ ಯಾವುದೇ ಸ್ಪಷ್ಟ ನಿಲುವಿಗೆ ಬರುತ್ತಿಲ್ಲ. ಸರ್ಕಾರ ರಚನೆಗೂ ಮೊದಲು ನಮ್ಮ ಸರ್ಕಾರ ಬಂದ್ರೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಲಾಗುವುದು ಎಂದು ಭರವಸೆ ನೀಡಿದ್ದರು.

ಇನ್ನೇನು ಕೆಲವೇ ಕೆಲ ದಿನಗಳಲ್ಲಿ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಆಗುವುದರಿಂದ ಸರ್ಕಾರ ಏನೂ ಮಾಡಲು ಸಾಧ್ಯವಿಲ್ಲದೆ ಇರುವದರಿಂದ . ಹಾಗಾಗಿ ಆದಷ್ಟು ಬೇಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹಾಗೂ ಲಿಂಗಾಯತ ಸಮಾಜಕ್ಕೆ ಒಬಿಸಿ ಮೀಸಲಾತಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾರ್ಚ್ 12ರಂದು ಸಂಜೆ 4 ಗಂಟೆಗೆ ಶರಣು ಬಸವೇಶ್ವರ ಜಾತ್ರೆ ಮೈದಾನದಲ್ಲಿ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ನಮ್ಮ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು ಎಂದು ಹೇಳಿದರು

ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯನವರ ಸರ್ಕಾರ ಬಂದ ಮೇಲೆ ನಮ್ಮ ಬೇಡಿಕೆ ಇಡೇರಿಸುವ ಭರವಸೆ ನೀಡಿದರು ಆದರೂ ಕೂಡ ಇಲ್ಲಿಯವರೆಗೆ ಈಡೇರಿಲ್ಲ  ನಾವು  ಮೊದಲು ಇದೇ ಭಾಗದಿಂದ ಹೋರಾಟವನ್ನು ಪ್ರಾರಂಭಿಸಿ ಹಲವು ಜಿಲ್ಲೆಗಳ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಹೋರಾಟವನ್ನು ಮಾಡಿದ್ದೇವೆ ಈಗ ಕಾಂಗ್ರೆಸ್ ಸರ್ಕಾರದಲ್ಲಿ 12 ಶಾಸಕರು ಮಂತ್ರಿಗಳು ಇದ್ದಾರೆ ನಾವು ಅವರಿಗೆ ಒತ್ತಾಯವನ್ನ ಮಾಡಿದ್ದೇವೆ ನೀವು ದೆಹಲಿಗೆ ಹೋಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮನವರಿಕೆ ಮಾಡಿ ನಮ್ಮ ಹೋರಾಟಕ್ಕೆ ಹಾಗೂ ನಮ್ಮ ಬೇಡಿಕೆಗೆ ಇಡೇರಿಸವಂತೆ  ಮನವಿ ಮಾಡಿಕೊಳ್ಳಿ ಎಂದು ಹೇಳಿದರು

ನಮ್ಮ ಸಮಾಜಕ್ಕೆ ಸಾಮಾಜಿಕ ನ್ಯಾಯವನ್ನು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಧರೆಪ್ಪ ಠಕ್ಕಣವರ ಶಿವಾನಂದ ಪಾಟೀಲ್, ನಂದೇಶ್ವರ ಅಯುಷ್ಮಾನ ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!