ಬೆಳಗಾವಿ. ಅಥಣಿ
ಅನಿವಾರ್ಯ ಕಾರಣದಿಂದ ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯನ್ನು ಗೋಕಾಕನಲ್ಲೇ ಶಂಕು ಸ್ಥಾಪನೆ..
ಬೆಳಗಾವಿ :ಜಿಲ್ಲೆಯ ಅಥಣಿ ತಾಲೂಕಿನ ರಡ್ಡೆರಹಟ್ಟಿ ಗ್ರಾಮದಲ್ಲಿ 30 ಲಕ್ಷ ರೂ ವೆಚ್ಚದ ವಿಠ್ಠಲ ರುಕ್ಮಿಣೀ ದೇವಸ್ಥಾನದ ಸಮುದಾಯ ಭವನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಮಹೇಶ ಕುಮಠಳ್ಳಿ
ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಾರ್ಚ್ 28ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಅದನ್ನು ಉದ್ಘಾಟನೆ ಮಾಡಿಸಲಾಗುವುದು ಎಂದು ಪತ್ರಿಕಾ ಗೋಷ್ಠಿ ಯಲ್ಲಿ ಹೇಳಿದರು ಆದರೆ ಅನಿವಾರ್ಯ ಕಾರಣದಿಂದ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯನ್ನು ಮಾನ್ಯ ಮುಖ್ಯಮಂತಿಗಳು ಗೋಕಾಕನಲ್ಲೇ ಶಂಕು ಸ್ಥಾಪನೆ ಮಾಡುತ್ತಾರೆ ಎಂದು ಶಾಸಕ ಮಹೇಶ್ ಕುಮಠಳ್ಳಿ ಹೇಳಿದ್ದಾರೆ.
ಕಾಮಗಾರಿ ಭೂಮಿಪೂಜೆ ನೆರವೇರಿಸಿ ಮಾಧ್ಯಮ ಮಿತ್ರರಿದಿಗೆ ಮಾತನಾಡಿದರು.
ಅಮ್ಮಾಜೇಶ್ವರಿ ಏತ ನೀರಾವರಿ ಮಂಜೂರಾತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿಯವರ ಸಹಕಾರವನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಬಸಪ್ಪ ಚನ್ನಾಪುರ, ಪಾಂಡು ಬೋಸಲೇ, ಸಹದೇವ ಅರಾಗೋಡ್ಡಿ, ನಿಂಗಪ್ಪ ಖೋತ, ಅಣ್ಣಪ್ಪ ಕಿತ್ತೂರ, ಶಿವಾನಂದ ಗಲಗಲಿ, ಮುಕೇಶ ಬೋಸಲೇ ಹಾಗೂ ಇನ್ನು ಹಲವಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು