76ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದಶಾಸಕ ಮಹೇಂದ್ರ ತಮ್ಮಣ್ಣವರ

Share the Post Now

ರಾಯಬಾಗ. ಕಪ್ಪಲಗುದ್ದಿ

76ನೇ ಗಣರಾಜ್ಯೋತ್ಸವ ಅಂಗವಾಗಿ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕುಡಚಿ ಮತಕ್ಷೇತ್ರದ ಶಾಸಕ ಮಹೇಂದ್ರ ತಮ್ಮಣ್ಣವರ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿ, ಮಾತನಾಡಿದ ಅವರು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮ ಅಧಿಕಾರ ಕಲ್ಪಿಸಿಕೊಟ್ಟ ದಿನ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಭವ್ಯ ಭಾರತಕ್ಕೆ ದಾರಿದೀಪವಾಗಿದೆ.



ಜಗತ್ತಿನ ಪ್ರಬಲ ರಾಷ್ಟ್ರವಾಗಿ ಭಾರತ ಹೊರಹೊಮ್ಮಲು ಅದು ಬುನಾದಿಯಾಗಿದೆ ಎಂದ ತಿಳಿಸಿದರು.

ಶಾಲಾ-ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಪ್ರಾಂಶುಪಾಲರು ಸೇರಿದಂತೆ  ಇತರರು ಉಪಸ್ಥಿತರಿದ್ದರು

ವರದಿ :ಕೆ ಎಸ್ ಕಾಂಬ್ಳೆ

Leave a Comment

Your email address will not be published. Required fields are marked *

error: Content is protected !!