ಬೆಳಗಾವಿ
ವರದಿ :ಸಚಿನ್ ಕಾಂಬ್ಳೆ
ಅಥಣಿ ಮತಕ್ಷೇತ್ರದ ಸಪ್ತಸಾಗರ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಬೂತ್ ವಿಜಯ ಅಭಿಯಾನಕ್ಕೆ ಅಥಣಿ ಮತಕ್ಷೇತ್ರದ ಶಾಸಕರಾದ ಮಹೇಶ್ ಕುಮಟಳ್ಳಿ ಅವರು ಚಾಲನೆ ನೀಡಿದರು.
ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಕುರಿತಂತೆ ಕಾರ್ಯಕರ್ತರೊಂದಿಗೆ ಚರ್ಚಿಸಿ, ಬೂತ್ ಸಮಿತಿಗಳ ರಚನೆ, ಪೇಜ್ ಪ್ರಮುಖರ ನಿಯುಕ್ತಿ, ಕಾರ್ಯಕರ್ತರ ಮನೆಗಳ ಮೇಲೆ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅಶೋಕ ಐಗಳಿ, ಸಂಜಯ ನಾಡಗೌಡಾ,ಸೇರಿದಂತೆ ಮತ್ತಿತರರ ಮುಖಂಡರು, ಬೂತ್ ಅಧ್ಯಕ್ಷರು, ಸದಸ್ಯರು, ಶಕ್ತಿ ಕೇಂದ್ರದ ಪ್ರಮುಖರು, ಪೇಜ ಪ್ರಮುಖರು ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.