ವರದಿ: ಸಂಜೀವ ಬ್ಯಾಕುಡೆ, ರಾಯಬಾಗ
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲನ್ನು (ನಂ.20669) ನಿಲುಗಡೆ ಮಾಡಬೇಕೆಂದು ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಮನವಿ ರವಾನಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ ಅವರು, ಹುಬ್ಬಳ್ಳಿಯಿಂದ ಪುಣೆಗೆ ತೆರಳುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (ನಂ. 20669) ರಾಯಬಾಗ ತಾಲೂಕು ಕುಡಚಿ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಿದರೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಈ ತಾಲೂಕಿನಿಂದ ಪುಣೆಗೆ ತೆರಳುವವರಿಗೆ ಹಾಗೂ ಪುಣೆಯಿಂದ ಬೆಳಗಾವಿ ಜಿಲ್ಲೆಗೆ ಬರುವವರಿಗೆ ಅನುಕೂಲವಾಗಲಿದೆ ಎಂದು ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ತಿಳಿಸಿದ್ದಾರೆ. ಸದ್ಯ ಹುಬ್ಬಳ್ಳಿಯಿಂದ ಪುಣೆಗೆ ತೆರಳುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಕುಡಚಿ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡುವಂತೆ ಜನರಿಂದ ಒತ್ತಾಯ ಕೇಳಿ ಬಂದಿದ್ದು. ಅದರಲ್ಲೂ ಮುಖ್ಯವಾಗಿ ರಾಯಬಾಗ ತಾಲೂಕಿನ ಕುಡಚಿ ರೈಲು ನಿಲ್ದಾಣ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವುದರಿಂದ ಇಲ್ಲಿರುವ ಜನರಿಗೆ ತಮ್ಮ ದೈನಂದಿನ ಕೆಲಸಕ್ಕಾಗಿ ಬೆಳಗಾವಿ ನಗರಕ್ಕೆ ತೆರಳಲು ಕ್ಷೇತ್ರದ ಜನರಿಂದ ಭಾರಿ ಬೇಡಿಕೆಯಿದ್ದು ಶೀಘ್ರವೇ ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರು ರಾಯಬಾಗ ತಾಲೂಕಿನ ಕುಡಚಿ ರೈಲು ನಿಲ್ದಾಣದಲ್ಲಿ ‘ವಂದೇ ಭಾರತ ರೈಲು’ ನಿಲುಗಡೆಗೆ ಕ್ರಮ ವಹಿಸುವಂತೆ ಮನವಿ ಮಾಡಿದ್ದಾರೆ.