ಬೆಳಗಾವಿ.
ರಾಯಬಾಗ ಪಟ್ಟಣದ ಕಾಂಗ್ರೆಸ್ ಜನಸಂಪರ್ಕ ಕಚೇರಿಯಲ್ಲಿ ಇಂದು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು. ಮಳೆ ಮತ್ತು ಬಿಸಿಲಿನ ತಾಪದಿಂದ ರಕ್ಷಣೆ ನೀಡುವ ಜೊತೆಗೆ, ಇದು ಸಣ್ಣ ವ್ಯಾಪಾರಿಗಳ ಜೀವನೋಪಾಯಕ್ಕೆ ಚಿಕ್ಕದಾದ ಸಹಕಾರಿಯಾಗಿದೆ ಎಂದು ಭಾವಿಸುತ್ತೇನೆ.
ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಸಕ್ರಿಯವಾಗಿರುವ ಸತೀಶ ಜಾರಕಿಹೊಳಿ ಫೌಂಡೇಶನ್, ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತನ್ನ ಸೇವೆಯನ್ನು ಮುಂದುವರೆಸಿದೆ. ಜನರ ಅವಶ್ಯಕತೆಗಳಿಗೆ ಸ್ಪಂದಿಸುವುದು ಫೌಂಡೇಶನ್‌ನ ಮೂಲ ಧ್ಯೇಯವಾಗಿದ್ದು, ಸಚಿವ ಸತೀಶ ಜಾರಕಿಹೊಳಿಯವರ ಸಾಮಾಜಿಕ ಬದ್ಧತೆಯಂತೆ ಅಗತ್ಯವಿರುವ ಎಲ್ಲರಿಗೂ ನೆರವು ಒದಗಿಸುತ್ತಿದೆ





