ರಾಯಬಾಗ:24ರಂದು ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭೆ

Share the Post Now




ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ, ಸಾಮೊಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ರಾಯಬಾಗ ಇವರ ಸಹಯೋಗದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಜರುಗಲಿದೆ.

ಮುಂಜಾನೆ 8.30ರಿಂದ 10.30ರ ವರೆಗೆ ಜೈನ ಬಸದಿ ಗುರುಭವನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ ಜರುಗಲಿದೆ. 11ಗಂಟೆಗೆ ಸಭಾ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಾನಂದವಾಡಿಯ ಗುರು ಬ್ರಹ್ಮಾನಂದ ಆಶ್ರಮದ ಪ.ಪೂ. ಡಾ. ಅಭಿನವ ಬ್ರಹ್ಮಾನಂದ ಸ್ವಾಮಿಜಿ ವಹಿಸಲಿದ್ದು, ಉದ್ಘಾಟಕರಾಗಿ ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಅಧ್ಯಕ್ಷತೆ ಮಾಜಿ ಪಟ್ಟಣ ಪಂಚಾಯಿತ ಅಧ್ಯಕ್ಷ ಸಂತೋಷ್ ಮೇತ್ರಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚಿಕ್ಕೋಡಿ ಜಿಲ್ಲಾ ನಿರ್ದೇಶಕ ವಿಠ್ಠಲ ಸಾಲಿಯಾನ್, ಸಿಪಿಐ ಎಚ.ಡಿ.ಮುಲ್ಲಾ, ಹಿರಿಯ ನ್ಯಾಯವಾದಿ ಎಲ್.ಬಿ.ಚೌಗಲಾ, ಯೋಜನಾಧಿಕಾರಿ ಸಚೀನಕುಮಾರ ಬಿ. ಆಗಮಿಸಲಿದ್ದು,

ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಸಹ ಕಾರ್ಯದರ್ಶಿ, ಕೋಶಾಧಿಕಾರಿ, ಸರ್ವ ಸದಸ್ಯರು ಉಪಸ್ಥಿತರಿರುವರು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ ರಾಯಬಾಗ ಯೋಜನಾಧಿಕಾರಿ ಸಚೀನಕುಮಾರ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

error: Content is protected !!