ಬೆಳಗಾವಿಯ ಇಎಸ್ ಐ ಆಸ್ಪತ್ರೆಯನ್ನು ಅತ್ಯಾಧುನಿಕ ಮಾದರಿಯನ್ನಾಗಿ ನಿರ್ಮಿಸುವ ಅವಶ್ಯಕತೆ ಇದೆ ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಶೀಘ್ರದಲ್ಲಿಯೇ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದುಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಬೆಳಗಾವಿಯಲ್ಲಿ ಬುಧವಾರ ನಡೆದ ಕಾರ್ಮಿಕ ಇಲಾಖೆ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಯಾಬಿನೆಟ್ ದರ್ಜೆ ಸಚಿವರಿಗೆ ಆಯಾ ಇಲಾಖೆ ಬಗ್ಗೆ ಗಮನ ಹರಿಸುವಂತೆ ನಮ್ಮ ನಾಯಕ ಸಿದ್ದರಾಮಯ್ಯ ತಾಖಿತ್ ಮಾಡಿದ್ದಾರೆ ಅದಕ್ಕಾಗಿ ನಾವು ನಮ್ಮ ಇಲಾಖೆಗಳಿಗೆ ಭೇಟಿ ನೀಡಿ ಇಲಾಖೆಯ ರಿವೀವ್ ಗಳ ಬಗ್ಗೆ ವರದಿ ತೆಗೆದುಕೊಂಡಿದ್ದೇವೆ
ಬೆಳಗಾವಿಯ ಇಎಸ್ ಐ ಆಸ್ಪತ್ರೆಯನ್ನು ಅತ್ಯಾಧುನಿಕ ಮಾದರಿಯನ್ನಾಗಿ ನಿರ್ಮಿಸುವ ಅವಶ್ಯಕತೆ ಇದೆ ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಶೀಘ್ರದಲ್ಲಿಯೇ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದರು.
ಕರ್ನಾಟಕದಲ್ಲಿ ಜೊಮಾಟೊ, ಸ್ವಿಗ್ಗಿ, ಅಮೆಜಾನ್, ಫ್ಲಿಪ್‌ಕಾರ್ಟ್‌ನಂತಹ ಆನ್‌ಲೈನ್ ಸೇವೆಗಳನ್ನು ಒದಗಿಸುವ ಖಾಸಗಿ ಕಂಪನಿಗಳಲ್ಲಿ 3 ರಿಂದ 4 ಲಕ್ಷ ಉದ್ಯೋಗಿಗಳನ್ನು ಹೊಂದಿವೆ. ಅವರಿಗೆ ಕಾರ್ಮಿಕ ಇಲಾಖೆ ಮೂಲಕ ಸಾಮಾಜಿಕ ಭದ್ರತೆ ಒದಗಿಸಲಾಗುವುದು ಎಂದು ಸಚಿವ ಲಾಡ್ ಹೇಳಿದರು.
ಬಿಜೆಪಿಯವರ ಭ್ರಷ್ಟಾಚಾರದ ಬಗ್ಗೆ ಮೊದಲು ಮಾತನಾಡಿ ನಂತರ ಬೇರೆಯವರಿಗೆ ಬುದ್ಧಿ ಕಲಿಸಲಿ. ರಾತ್ರೋರಾತ್ರಿ 500,1000 ರೂಪಾಯಿ ನೋಟಗಳನ್ನೂ ಬ್ಯಾನ್ ಮಾಡಿ 3 ಲಕ್ಷ ಕೋಟಿ ರೂಪಾಯಿ ಕಪ್ಪುಹಣವನ್ನು ವೈಟ್ ಮಾಡಿದ್ದಾರೆ ಇದರಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ.
ದ್ವಾರಕಾ ಕಾರಿಡಾರ್‌ನ 18 ಕಿಮೀ ರಸ್ತೆಗೆ 250 ಕೋಟಿ ರೂಪಾಯಿಗಳ ಬೃಹತ್ ವೆಚ್ಚವನ್ನು ಕೇಂದ್ರ ಸರ್ಕಾರದ ಅಡಿಯಲ್ಲಿ ಸಿಎಜಿ ದೂಷಿಸಿದೆ. ಮಧ್ಯಪ್ರದೇಶದಲ್ಲಿ ಪ್ರಧಾನಮಂತ್ರಿ ಸ್ವಾಸ್ಥ್ಯ ಯೋಜನೆಯಲ್ಲಿ ಬಿಜೆಪಿ ಸಂಸದರೊಬ್ಬರ ಮೊಬೈಲ್ ನಂಬರ್ ಮೂಲಕ ನೋಂದಣಿ ಮಾಡಿಸಿ, 7 ಲಕ್ಷ ಮಂದಿಯನ್ನು ಫಲಾನುಭವಿಗಳೆಂದು ತೋರಿಸಿ ಸತ್ತವರ ನೆತ್ತಿಯ ಮೇಲೆ ಬೆಣ್ಣೆ ತಿಂದಿದ್ದಾರೆ.
ಇಂತಹ ಹಲವು ಭ್ರಷ್ಟಾಚಾರಗಳನ್ನು ಬಿಜೆಪಿ ಮಾಡಿದೆ. ಕಳೆದ ಹತ್ತು ವರ್ಷಗಳಲ್ಲಿ ಎಲ್ಲವೂ ಮೋದಿ, ಬಿಜೆಪಿ ಮತ್ತು ದೊಡ್ಡ ಕೈಗಾರಿಕೋದ್ಯಮಿಗಳಿಗೆ ಮಾತ್ರ ಅನುಕೂಲಕರವಾಗಿದೆ. ದೇಶದ ಬಡ ರೈತರಿಗೆ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಅಥವಾ ನಿರುದ್ಯೋಗಿ ಯುವಕರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದರು .