ಅಕ್ಟೋಬರ್ 31 ನರಕ ಚತುರ್ದಶಿ, ನವೆಂಬರ್ 1 ಕನ್ನಡ ರಾಜ್ಯೋತ್ಸವ ಹಾಗೂ ನವೆಂಬರ್ 2ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 30ರಿಂದ ನವೆಂಬರ್ 1ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್ 3 ಹಾಗೂ ನವೆಂಬರ್ 4ರಂದು ವಿಶೇಷ ಬಸ್ ಕಾರ್ಯಾಚರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಇರಲಿದೆ.
ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.
ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಸಾರಿಗೆ ಸಂಸ್ಥೆಯ ಪ್ರತಿಷ್ಠಿತ ಬಸ್‌ಗಳು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಹೊರಡಲಿವೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳ ಆಸನಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.