ನಾಲ್ಕನೇ ರಾಜ್ಯ ಮಟ್ಟದ ಜ್ಯೋತಿಷ್ಯ ಸಮಾವೇಶ ಹಾಗೂ ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ ಕಾರ್ಯಕ್ರಮ.
ವರದಿ: ಸಂಗಮೇಶ ಹಿರೇಮಠ.
ಮುಗಳಖೋಡ: ಪಟ್ಟಣದ ಶ್ರೀ ಸಿದ್ದರಾಮೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಶ್ರೀ ಶಿವಾನಂದ ಹಂಚಿನಾಳ ಅವರಿಗೆ ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ ಪ್ರಧಾನ.
ಬೆಂಗಳೂರಿನ ವಿದ್ಯಾರಣ್ಯಪುರದ ಕಳತೂರ್ ಗಾರ್ಡನ್ನಲ್ಲಿ ಗೋಲ್ಡ್ ಟ್ರೀ ಆಸ್ಟ್ರೋ ಸಂಸ್ಥೆಯ ವತಿಯಿಂದ ಆಯೋಜಿಸಿದ ನಾಲ್ಕನೇ ರಾಜ್ಯಮಟ್ಟದ ಜ್ಯೋತಿಷ್ಯ ಕಾರ್ಯಗಾರ ಹಾಗೂ ಸಾಧಕರಿಗೆ ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶಿಕ್ಷಣ ಮತ್ತು ಜ್ಯೋತಿಷ್ಯ ಕ್ಷೇತ್ರದಲ್ಲಿ ತಮ್ಮ ಕಾರ್ಯ ವೈಖರಿಯ ಮೂಲಕ ಅಪಾರ ಸಾಧನೆಗೈದ ಮುಗಳಖೋಡ ಪಟ್ಟಣದ ಪ್ರಧ್ಯಾಪಕರಾದ ಶ್ರೀ ಶಿವಾನಂದ ಹಂಚಿನಾಳ ಅವರಿಗೆ ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇವರಿಗೆ ಮುಗಳಖೋಡ ಪಟ್ಟಣದ ಹಿರಿಯರು ಹಾಗೂ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥಯ ಆಡಳಿತ ಮಂಡಳಿಯ ಸರ್ವ ಸದಸ್ಯರು, ಸಿಬ್ಬಂದಿಗಳು ಹಾಗೂ ಮುದ್ದು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.