ಬೆಳಗಾವಿ : ಕಳೆದೆರಡು ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತನ್ನು ತೋರಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬೆಳಗಾವಿ ಮೂಲದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಸಂತೋಷ್ ಕೊಪ್ಪದ್ ಬಂಧಿತ ಆರೋಪಿ. ಈತನ ಸಹಚರ ಬೈಲಹೊಂಗಲದ ದೇಶನೂರು ನಿವಾಸಿ ವಿಶಾಲ್ ಪಾಟೀಲ್ ತಲೆಮರೆಸಿಕೊಂಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ಇಬ್ಬರು ಆರೋಪಿಗಳು ತಮ್ಮನ್ನು ಲೋಕಾಯುಕ್ತ ಅಧಿಕಾರಿಗಳು ಎಂದು ಹೇಳಿಕೊಂಡು ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು. ದೂರಿನ ಬಳಿಕ ಆರೋಪಿಗಳನ್ನು ಹಿಡಿಯಲು ಬಲೆ ಬೀಸಿದ ಪೊಲೀಸರು, ಪಿಡಬ್ಲ್ಯುಡಿ ಅಧಿಕಾರಿಗಳು ಎಂಬ ನೆಪದಲ್ಲಿ ಆರೋಪಿಗಳಿಗೆ ದೂರವಾಣಿ ಕರೆ ಮಾಡಿ ಲಂಚ ನೀಡಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಈ ವೇಳೆ ಆರೋಪಿಗಳು ಲಂಚ ಪಡೆಯಲು ಬಂದಾಗ ಸಂತೋಷ್ ಕೊಪ್ಪದ್ ಎಂಬಾತನನ್ನು ಬಂಧಿಸಿದ್ದಾರೆ. ಈ ವೇಳೆ ಮತ್ತೋರ್ವ ಆರೋಪಿ ಎಸ್ಕೇಪ್ ಆಗಿದ್ದಾನೆ.