ಮೂಡಲಗಿ.
ಹಳ್ಳೂರ.
ವಿಶ್ವ ವಿಕಲಚೇತನರ ಮತ್ತು ಹಿರಿಯ ನಾಗರಿಕರ ದಿನಾಚರಣೆಯ ನಿಮಿತ್ಯ 2024/25 ಪ್ರಯುಕ್ತ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ಬೆಳಗಾವಿ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಬೆಳಗಾವಿ ಜಿಲ್ಲಾ ಮಟ್ಟದ ಕ್ರೀಡೆ ಮತ್ತು ಸಂಸ್ಕೃತಿ ಕ
ಸ್ಪರ್ಧೆ ಅಂಗವಿಕಲರ ಕ್ಷೇತ್ರದಲ್ಲಿ ಅತ್ತ್ಯುತ್ತಮ ಸೇವೆ ಮಾಡಿದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುಲಗಂಜಿಕೊಪ್ಪ ಗ್ರಾಮದ ಹಣಮಂತ ಲ ಹಾವನ್ನವರ ಆವರಿಗೆ ಜಿಲ್ಲಾಡಳಿತ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು.
ಈ ಸಮಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ ಸಿಂದೆ.
ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ನಾಮದೇವ ಬಿಲಕರ. ಅಂಗವಿಕಲ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ನಾಗರಾಜ್ ಸೇರಿದಂತೆ ಅನೇಕರಿದ್ದರು.





