ಬೆಳಗಾವಿ : ಕಾಂಗ್ರೆಸ್ ಹೊರಡಿಸಿದ ಎರಡನೇ ಪಟ್ಟಿಯಲ್ಲಿ ಕಿತ್ತೂರು ಮತಕ್ಷೇತ್ರದ ಅಭ್ಯರ್ಥಿ ಬಾಬಾಸಾಹೇಬ್ ಪಾಟೀಲ್ ಅವರಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಮಾಜಿ ಶಾಸಕ ಡಿ.ಬಿ ಇನಾಮದಾರ್ ಬೆಂಬಲಿಗರು ಟಯರ್ ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರಹಾಕಿದರು.
ಕಳೆದ ಐದು ಬಾರಿ ಕಾಂಗ್ರೆಸ್ ಶಾಸಕರಾಗಿದ್ದ ಡಿ.ಬಿ ಇನಾಮದಾರ್ ಸಧ್ಯ ಅನಾರೋಗ್ಯಕ್ಕೆ ಒಳಗಾಗಿದ್ದು ಅವರ ಸೊಸೆ ಲಕ್ಷ್ಮೀ ಇನಾಮದಾರ್ ಅವರಿಗೆ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದರು. ಆದರೆ ಈ ಬಾರಿ ಡಿ.ಬಿ ಇನಾಮದಾರ್ ಅಳಿಯ ಬಾಬಾಸಾಹೇಬ್ ಪಾಟೀಲ್ ಅವರಿಗೆ ಟಿಕೆಟ್ ನೀಡಿದ್ದು ಸಧ್ಯ ಬಂಡಾಯಕ್ಕೆ ಕಾರಣವಾಗಿದೆ.
ಇನ್ನೂ ಕಾಂಗ್ರೆಸ್ ಟಿಕೆಟ್ ಕೈ ತಪ್ಪುತ್ತಿದ್ದಂತೆ ಡಿ.ಬಿ ಇನಾಮದಾರ್ ಮನೆಗೆ ಆಗಮಿಸಿದ ಕೈ ಕಾರ್ಯಕರ್ತರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ಹೊರಹಾದಿದ್ದಾರೆ. ಜೊತೆಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಈಗಾಗಲೇ ಬಂಡಾಯದ ಬೇಗುದಿ ಎದ್ದಿದ್ದು ಇನಾಮದಾರ್ ಮನೆತನ ಪಕ್ಷೇತರರಾಗಿ ಸ್ಪರ್ಧಿಸುತ್ತಾರಾ ಎಂಬುದು ಸ್ಪಷ್ಟವಾಗಿಲ್ಲ.